Gruhalakshmi Pending Money: ಗೃಹಲಕ್ಷ್ಮೀ ಯೋಜನೆಯ 4,000 ರೂ. ಪೇಂಡಿಂಗ್‌ ಹಣ DBT ಮೂಲಕ ವರ್ಗಾವಣೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ

By: ವಿಜಯಲಕ್ಷ್ಮಿ ಪೂಜಾರಿ

On: Tuesday, July 23, 2024 10:07 PM

Google News
Follow Us
Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆ ಜಮಾ ಆಗಿಲ್ಲವೇ..? ಗೃಹಲಕ್ಷ್ಮೀ ಯೋಜನೆಯ ಹಣವು (Gruhalakshmi Pending Money) ಯಾವಾಗ ಜಮಾ ಆಗುತ್ತದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್.

ನಿಮಗೆ ತಿಳಿದಿರುವಂತೆ ಜೂನ್ ಹಾಗೂ ಜುಲೈ ತಿಂಗಳಿನ ಗೃಹಲಕ್ಷ್ಮೀ ಯೋಜನೆಯ ಹಣ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ. ಎರಡು ತಿಂಗಳ ದುಡ್ಡು ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ..? ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

Gruhalakshmi Pending Money:

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಖಾತ್ರಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತರಲಾಗಿದೆ. ಈ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಸಾಕಷ್ಟು ಪ್ರಯೋಜನವಾಗಿದೆ.

ಗೃಹಲಕ್ಷ್ಮಿ ಯೋಜನೆಯ 11 ಮತ್ತು 12 ನೇ ಕಂತಿನ 4000 ರೂ ಹಣವು ಯಾವಾಗ ಸಂದಾಯವಾಗಲಿದೆ ಎಂದು ಬಹಳಷ್ಟು ಮಹಿಳಾ ಫಲಾನುಭವಿಗಳ ಕಾಯುತ್ತಿದ್ದಾರೆ. ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ಅರ್ಹ ಯಜಮಾನಿಯರ ಖಾತೆಗಳಿಗೆ ಯಾವಾಗ ಜಮಾ ಆಗಲಿದೆ ಎಂದು ತಿಳಿಸಲಿದ್ದೇವೆ.

ಜೂನ್ ಹಾಗೂ ಜುಲೈ ತಿಂಗಳಿನ ಗೃಹಲಕ್ಷ್ಮಿ ಯೋಜನೆಯ ಹಣವು ಫಲಾನುಭವಿಗಳಿಗೆ ಜಮಾ ಆಗಿಲ್ಲವೆಂದು ಸಾಕಷ್ಟು ಟೀಕೆಗಳು ಬರುತ್ತಿವೆ, ಗೃಹಲಕ್ಷ್ಮಿ ಯೋಜನೆಯನ್ನು ರದ್ದು ಮಾಡಲಾಗಿದೆ ಎಂಬ ವದಂತಿಗಳ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ (Gruhalakshmi Pending Money) ಹಣವನ್ನು ಈಗಾಗಲೇ DBT ಮೂಲಕ ವರ್ಗಾವಣೆ ಮಾಡಲಾಗುತ್ತಿದೆ 8 ರಿಂದ 10 ದಿನಗಳ ಒಳಗಾಗಿ ಹಣವು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಈ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತರಲಾಗಿದ್ದು, ಈ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದಿನಂತೆ ಮುಂದುವರೆಯಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ DBT Status Check ಮಾಡಿ, 2000 ರೂ. ಬಂತಾ ನೋಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಆದಾಯ ತೆರಿಗೆಯಲ್ಲಿ ಬದಲಾವಣೆ; ಮಧ್ಯಮವರ್ಗದವರ ತೆರಿಗೆ ಭಾರ ಇಳಿಕೆ

For Feedback - feedback@example.com

Leave a Comment