Gruha Lakshmi: ಇಂದಿನಿಂದಲೇ ಜೂನ್‌ ಹಾಗೂ ಜುಲೈ ಎರಡೂ ತಿಂಗಳ ಗೃಹಲಕ್ಷ್ಮೀ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅಧಿಕೃತ ಮಾಹಿತಿ

By: ವಿಜಯಲಕ್ಷ್ಮಿ ಪೂಜಾರಿ

On: Tuesday, August 6, 2024 3:47 PM

Google News
Follow Us
Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆ (Gruha Lakshmi) ಯ ಹಣ ಯಾವಾಗ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಕುರಿತಾಗಿ‌ ಅಧಿಕೃತ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳಿನ ಹಣ ಯಾವಾಗ ಸಂದಾಯವಾಗಲಿದೆ ಎಂದು ಮಹಿಳೆಯರು ಕಾತುರದಿಂದ ಕಾಯುತ್ತಿದ್ದಾರೆ. ಗೃಹಲಕ್ಷ್ಮೀ ಯೋಜನೆಯ 2,000 ರೂ. ಯಾವಾಗ ಅರ್ಹ ಫಲಾನುಭವಿಗಳ ಖಾತೆ ಸೇರಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

ಹೌದು ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಿದ್ದರು. ಅದರಂತೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಐದು ಯೋಜನೆಗಳನ್ನು ಜಾರಿ ಮಾಡಿದರು. ಈ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆ (Gruha Lakshmi) ಯ ಮೂಲಕ ಮಹಿಳೆಯರಿಗೆ 2 ರೂಪಾಯಿಗಳನ್ನು ನೀಡುತ್ತಿದ್ದಾರೆ.

ಮಂಡ್ಯದಲ್ಲಿ ಜರುಗಿದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಕಳೆದ ಎರಡು ತಿಂಗಳಿನಿಂದ ಹಣ ಜಮೆ ಆಗಿರಲಿಲ್ಲ. ಈಗ ಎಲ್ಲವೂ ಸರಿಯಾಗಿದೆ. ಇಂದಿನಿಂದಲೇ ಜೂನ್‌ ಹಾಗೂ ಜುಲೈ ಎರಡೂ ತಿಂಗಳ ಹಣವನ್ನು ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಹೇಳಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ:

ಸ್ವಾವಲಂಬಿ ಸಾರಥಿ ಯೋಜನೆ: ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಗೃಹಲಕ್ಷ್ಮೀ DBT Status Check ಮಾಡಿ, 2000 ರೂ. ಬಂತಾ ನೋಡಿ

ಉಚಿತ ಬೋರ್‌ವೇಲ್: ಗಂಗಾ ಕಲ್ಯಾಣ ಯೋಜನೆಗಾಗಿ ಅರ್ಜಿ ಆಹ್ವಾನ

For Feedback - feedback@example.com

Leave a Comment