ಎಲ್ಲರಿಗೂ ನಮಸ್ಕಾರ, ಬಿ.ಇಡಿ ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. 2025-26 ನೇ ಸಾಲಿನ ಸರ್ಕಾರಿ ಕೋಟಾದ B.Ed ಕೋರ್ಸ್’ಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು.
2 ವರ್ಷಗಳ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ B.Ed ಕಾಲೇಜುಗಳಲ್ಲಿನ ಸರಕಾರಿ ಕೋಟಾದ ಸೀಟುಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಸುವ ಕಾಲಾವಧಿ:
ಎರಡು ವರ್ಷಗಳ ಬಿ.ಇಡಿ ಕೋರ್ಸಿಗೆ ಇಲಾಖಾ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಲು ದಿನಾಂಕ 03/10/2025 ರಿಂದ 03/11/2025 ರವರೆಗೆ ಅವಕಾಶ ನೀಡಲಾಗಿದ್ದು, ಮೂಲ ದಾಖಲೆಗಳೊಂದಿಗೆ ಅರ್ಜಿ ಪರಿಶೀಲನೆಯ ಅವಧಿಯು ಅರ್ಜಿ ಸಲ್ಲಿಸಿದ ದಿನಾಂಕದಿಂದ ಒಂದು ವಾರ ಇರುತ್ತದೆ.
B.Ed Application 2025 ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗ/ ಪ್ರವರ್ಗ-1 ಅಭ್ಯರ್ಥಿಗಳಿಗೆ: 100 ರೂ.
ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ
ಇತರೆ ಅಭ್ಯರ್ಥಿಗಳಿಗೆ: 300 ರೂ.
ಇಲಾಖೆ ವೆಬ್‌ಸೈಟ್: https://schooleducation.karnataka.gov.in ನಲ್ಲಿ ಕೋರ್ಸ್ ಗೆ ಸಂಬಂಧಿಸಿದಂತೆ ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದ್ದು, ಅಭ್ಯರ್ಥಿಗಳು ಸರಿಯಾಗಿ ಅಧಿಸೂಚನೆಯನ್ನು ಓದಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ದೂರವಾಣಿ ಸಂಖ್ಯೆ: 080-22483140, 080-22483145
ಪ್ರಮುಖ ದಿನಾಂಕಗಳು:
ಅರ್ಜಿ ಆರಂಭ ದಿನಾಂಕ: 03-10-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-11-2025
B.Ed Application 2025 Online Link:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: schooleducation.karnataka.gov.in
ಇತರೆ ಮಾಹಿತಿಗಳನ್ನು ಓದಿ: