ಎಲ್ಲರಿಗೂ ನಮಸ್ಕಾರ, ಜನನ ಹಾಗೂ ಮರಣ ನೋಂದಣಿ ಮಾಡಿಸಲು ಇನ್ನು ಮುಂದೆ ಬೇರೆ ಕಡೆ ಹೋಗುವ ಅಗತ್ಯವಿಲ್ಲ. ನಿಮ್ಮ ಗ್ರಾಮ ಪಂಚಾಯತಿಗಳಲ್ಲಿಯೆ ಜನನ ಹಾಗೂ ಮರಣ ನೋಂದಣಿಯನ್ನು (Birth and Death Certificate) ಮಾಡಲಾಗುತ್ತದೆ. ಜುಲೈ 1 ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಆರಂಭಗೊಳಿಸಲಾಗುತ್ತಿದೆ.
ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಜುಲೈ 1ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
Birth and Death Certificate:
ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಉಪ ನೋಂದಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಪೂರ್ವಭಾವಿಯಾಗಿ ಜನನ, ಮರಣ ನೋಂದಣಿಗೆ ಸಂಬಂಧಿಸಿದಂತೆ ಅಧಿನಿಯಮ ಹಾಗೂ ನಿಯಮಗಳು ಮತ್ತು ನೋಂದಣಿಗೆ ಬಳಸಲಾಗುತ್ತಿರುವ ಇ-ಜನ್ಮ ತಂತ್ರಾಂಶದ ಬಗ್ಗೆ ತರಬೇತಿಯನ್ನು ನೀಡಲಾಗಿದೆ ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಯವರು ತಿಳಿಸಿದ್ದಾರೆ.
ಜನನ ಹಾಗೂ ಮರಣ ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳಲ್ಲಿ ನೋಂದಣಿ ಮಾಡಿಸಿದರೆ ಉಚಿತವಾಗಿ ಪ್ರಮಾಣ ಪತ್ರವನ್ನು ವಿತರಿಸಲಾಗುವುದು,
ಘಟನೆ ಸಂಭವಿಸಿದ 30 ದಿನಗಳ ತರುವಾಯ ಒಂದು ವರ್ಷದ ಒಳಗೆ ವರದಿಯಾಗುವ ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ತಹಶೀಲ್ದಾರರ ಲಿಖಿತ ಅನುಮತಿಯೊಂದಿಗೆ ರೂ. 5 ರೂ. ತಡೆ ಶುಲ್ಕ ಪಡೆದು ನೋ೦ದಾಯಿಸುವುದು.
ಒಂದು ವರ್ಷದ ನಂತರ ವರದಿಯಾಗುವ ಜನನ, ಮರಣ (Birth and Death Certificate) ಘಟನೆಗಳಿಗೆ ವಿಳಂಬ ನೋಂದಣಿ ಮಾಡಲು ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾ ಪ್ರಾಂತ ದಂಡಾಧಿಕಾರಿರವರ ಆದೇಶದೊಂದಿಗೆ ರೂ.10 ರೂ. ತಡೆ ಶುಲ್ಕ ಪಡೆದು ನೋಂದಾಯಿಸುವುದು.
ಜುಲೈ 1, 2024 ರಿಂದ ಇನ್ನು ಮುಂದೆ ಗ್ರಾಮ ಪಂಚಾಯತಿಗಳಲ್ಲೇ ಪ್ರತಿಯೊಂದು ಜನನ, ಮರಣ ನೋಂದಣಿ ಸೇವೆ ಲಭ್ಯ.
ಸಹಾಯವಾಣಿ:
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಹಾಗೂ ಇ-ಮೇಲ್ [email protected]/[email protected] ಮತ್ತು ಇ-ಜನ್ಮ ಸಹಾಯವಾಣಿ 1800-425-6578 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ಇತರೆ ಮಾಹಿತಿಗಳನ್ನು ಓದಿ:
3 ಲಕ್ಷ ರೂ. ಸಬ್ಸಿಡಿ ಮತ್ತು ಬಡ್ಡಿ ರಹಿತ ಸಾಲ ಸೌಲಭ್ಯ
ಗೃಹಲಕ್ಷ್ಮಿ DBT Status Check ಮಾಡಿ
ಗ್ರಾಹಕರಿಗೆ ಬಿಗ್ ಶಾಕ್: ಮೊಬೈಲ್ ರೀಚಾರ್ಜ್ ಶುಲ್ಕ ಶೇ.27 ರವರೆಗೆ ಏರಿಕೆ
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ
Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ