ಎಲ್ಲರಿಗೂ ನಮಸ್ಕಾರ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ದರದಲ್ಲಿ ಬಸ್ ಪಾಸ್ (BMTC Bus Pass) ನೀಡಲಿದೆ. ಉಚಿತ ಬಸ್ ಪಾಸ್’ಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 2024-25ನೇ ಸಾಲಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ಬಸ್ ಪಾಸ್ (BMTC Student Pass) ಗಾಗಿ ಮೇ 29 ರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಜೂನ್ 1 ರಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್‌ಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುತ್ತಿದೆ ಎಂದು BMTC ತಿಳಿಸಿದೆ.
BMTC Bus Pass Application:
2024-25ನೇ ಸಾಲಿನ ಬಸ್ ಪಾಸ್‌ನ ಆನ್‌ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್‌ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕವು ಪಾಸ್‌ಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 8 ರಿಂದ ಸಂಜೆ 6.30 ರವರೆಗೆ ವಾರದ ಎಲ್ಲಾ ದಿನಗಳಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬಿಎಂಟಿಸಿಯ ಕೆಂಪೇಗೌಡ ಬಸ್ ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ-19, ಶಾಂತಿನಗರ ಟಿಟಿಎಂಸಿ, ಕರಾರಸಾನಿ ಆನೇಕಲ್ ಬಸ್ ನಿಲ್ದಾಣದಲ್ಲಿ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಲಾಗಿದೆ.
ಬೇಕಾಗುವ ದಾಖಲೆಗಳು:
ಸ್ವೀಕೃತ ಪತ್ರ, ಶಾಲಾ/ಕಾಲೇಜಿನ ಗುರುತಿನ ಚೀಟಿ/ಶುಲ್ಕ ರಸೀದಿ/ ಶಾಲಾ ಮುಖ್ಯಸ್ಥರಿಂದ ದೃಡೀಕರಿಸಿದ ಪಾತ್ರವನ್ನು ಹಾಜರುಪಡಿಸುವುದು.
ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗೆ ಮತ್ತು ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ (ಕರ್ನಾಟಕದ ವಾಸಿಗಳಿಗೆ ಮಾತ್ರ) ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ.
BMTC Bus Pas Charges:

ಇತರೆ ಮಾಹಿತಿಗಳನ್ನು ಓದಿ:
ಗ್ರಾಹಕರಿಗೆ ಗುಡ್ ನ್ಯೂಸ್, LPG ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ
ಕಾರ್ಮಿಕರ ಇಲಾಖೆ ವಿದ್ಯಾರ್ಥಿವೇತನ 2024
10th Pass ಆದ ವಿದ್ಯಾರ್ಥಿಗಳಿಗೆ 73,500 ರೂ. ವಿದ್ಯಾರ್ಥಿವೇತನ