ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆ (Guarantee Schemes) ಗಳನ್ನು ನಿಲ್ಲಿಸುತ್ತದೇಯಾ..? ಅಥವಾ ಯಥಾವತ್ತಾಗಿ ಮುಂದುವರಿಸುವುದಾ ಎಂಬ ಜನರ ಗೊಂದಲಕ್ಕೆ ಮುಖ್ಯಮಂತ್ರಿಗಳೇ (CM Siddaramaiah) ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ನಾವು ಬಡವರಿಗಾಗಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.
Guarantee Schemes in Karnataka:
ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳು ಕೂಡ ಮುಂದುವರೆಯಲಿವೆ, ಈ ಬಗ್ಗೆ ಯಾವುದೇ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಈ ಬಾರಿ ಲೋಕಸಭೆಯಲ್ಲಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯಷ್ಟು ಫಲಿತಾಂಶ ಬಂದಿಲ್ಲ. ಒಂದರಿಂದ 9 ಸ್ಥಾನಕ್ಕೇರಿದ್ದು, ಕಳೆದ ಬಾರಿಗಿಂತ 13% ಹೆಚ್ಚು ಮತಗಳ ಹಂಚಿಕೆ ನಮ್ಮ ಪರವಾಗಿದೆ.
ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ ಆದರೆ ನಿರೀಕ್ಷೆಯಂತೆ ಆಗಿಲ್ಲ ಎಂದು ಹೇಳಿದ್ದಾರೆ.
ಇತರೆ ಮಾಹಿತಿಗಳನ್ನು ಓದಿ:
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ