ಎಲ್ಲರಿಗೂ ನಮಸ್ಕಾರ, ಉಚಿತ ಹೊಲಿಗೆ ಯಂತ್ರ ಯೋಜನೆಗೆ (Free Sewing Machine Scheme) ನೀವು ಅರ್ಜಿ ಸಲ್ಲಿಸಬೇಕೆ..? ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂದು ನಿಮಗೆ ತಿಳಿದಿಲ್ಲವೆ..? ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಕೇಂದ್ರ ಸರ್ಕಾರದಿಂದ ನೀಡಲಾಗುವ ಉಚಿತ ಹೊಲಿಗೆ ಯಂತ್ರ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಿದ್ದೇವೆ. ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದಿಂದ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡಲು ಉಚಿತ ಹೊಲಿಗೆ ಯಂತ್ರ ಮತ್ತು ಇತರೆ ಯಂತ್ರಗಳನ್ನು ನೀಡಲಾಗುತ್ತದೆ. ನೀವು ಕೂಡ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.
Free Sewing Machine Scheme ಯೋಜನೆ ಮಾಹಿತಿ:
ಪ್ರಧಾನ ಮಂತ್ರಿ ವಿಶ್ವಕರ್ಮ (PM Vishwakarma Scheme) ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡಲು ಅರ್ಹ ಕುಶಲಕರ್ಮಿಗಳಿಗೆ ವಿಶೇಷ ತರಬೇತಿಯನ್ನು ನೀಡಲಾಗಿತ್ತದೆ. ಕುಶಲಕರ್ಮಿಗಳಿಗೆ ತರಬೇತಿ ನೀಡಿ ಕಲೆಗಳಿಗೆ ಪ್ರೋತ್ಸಾಹಿಸಲಾಗುತ್ತದೆ.
PM Vishwakarma ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿರುವ 18 ವರ್ಷದ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯಗಳು ದೊರೆಯಲಿವೆ. ಈ ಯೋಜನೆಯಡಿ ಕೌಶಲ ಅಭಿವೃದ್ಧಿ ತರಬೇತಿ, ತಾಂತ್ರಿಕ ಜ್ಞಾನ, ಹೊಸ ಉಪಕರಣ ಹಾಗೂ ಬ್ಯಾಂಕ್ ಖಾತರಿ ರಹಿತ ಸಾಲ ಸೌಲಭ್ಯ ದೊರೆಯುತ್ತದೆ.
ಅರ್ಹ ಫಲಾನುಭವಿಗಳಿಗೆ ಟೂಲ್ ಕಿಟ್ (Free Sewing Machine Scheme) ಖರೀದಿ ಮಾಡಲು ಈ ಯೋಜನೆಯಡಿ 15,000 ರೂ. ವರೆಗೆ ಮೌಲ್ಯದ ಇ–ವೋಚರ್ಸ್ ಅಥವಾ ಇ–ರುಪಿ ನೀಡುತ್ತಾರೆ. ಸರ್ಕಾರದ ಪರವಾಗಿ ಈ ಪ್ರೋತ್ಸಾಹಧನದ ವೋಚರ್ಸ್‌ಗಳನ್ನು ಬ್ಯಾಂಕ್ ಮೂಲಕ ವಿತರಣೆ ಮಾಡಲಾಗುತ್ತದೆ
PM Vishwakarma ಯೋಜನೆಯಲ್ಲಿ ನೋಂದಣಿ ಮಾಡಿಕೊಂಡಿರುವ ಕುಶಲಕರ್ಮಿಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ 5 ರಿಂದ 7 ದಿನಗಳ ತರಬೇತಿ ನೀಡಲಾಗುತ್ತದೆ.
ಅರ್ಹತೆಗಳು:
- ಕನಿಷ್ಠ 18 ವರ್ಷ ಪೂರೈಸಿರಬೇಕು.
- ಅರ್ಜಿದಾರ ತನ್ನ ಸಾಂಪ್ರದಾಯಿಕ ಅಸಂಘಟಿತ ಸ್ವಯಂ ಉದ್ಯೋಗ (Tailor-Darzi) ದಲ್ಲಿ ತೊಡಗಿಕೊಂಡಿರಬೇಕು.
- ಕುಟುಂಬದ ಒಬ್ಬರು ಮಾತ್ರ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.
- ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಜಿದಾರ ಕಳೆದ 5 ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಅಥವಾ ರಾಜ್ಯ ಸರ್ಕಾರದಿಂದ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆದಿರಬಾರದು. (e.g. PMEGP, PM SVANidhi, Mudra)
- ಸರ್ಕಾರಿ ನೌರಕರಿಗೆ ಮತ್ತು ಅವರ ಕುಟುಂಬದವರಿಗೆ ಈ ಯೋಜನೆಯು ಸಿಗುವುದಿಲ್ಲ.
ಬೇಕಾಗುವ ದಾಖಲೆಗಳು:
- ಆಧಾರ ಕಾರ್ಡ್
- ರೇಷನ್ ಕಾರ್ಡ್ ಕಡ್ಡಾಯ
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆ ವಿವರ
ಅರ್ಜಿ ಸಲ್ಲಿಸುವ ವಿಧಾನ:
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಬಸುವವರು ಕೇಂದ್ರ ಸರ್ಕಾರದ PM Vishwakarma ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಗ್ರಾಮ ಪಂಚಾಯತಿ, ನಿಮ್ಮ ಹತ್ತಿರದ CSC ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯು ಅರ್ಜಿ ಸಲ್ಲಿಸಬಹುದು.
Free Sewing Machine Scheme ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕೃತ ವೆಬ್‌ಸೈಟ್: pmvishwakarma.gov.in
ಇದೆ ರೀತಿಯ Latest ಮಾಹಿತಿ ಪಡೆಯಲು ನಮ್ಮ WhatsApp Group ಗೆ Join ಆಗಿ ಹಾಗೂ ನಮ್ಮ ವೆಬ್‌ಸೈಟ್ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ.
ಇತರೆ ಮಾಹಿತಿಗಳನ್ನು ಓದಿ:
ಮೊಬೈಲ್‌ನಲ್ಲೇ ನಿಮ್ಮ ಜಮೀನಿನ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ 2000 ರೂ. ಹಣ ಬಂದಿಲ್ಲವೇ..? ಸರ್ಕಾರದಿಂದ ಹೊಸ ಅಪಡೇಟ್
ರೇಷನ್ ಕಾರ್ಡ್ Status Check ಮಾಡಿ
ಬೆಳೆ ಪರಿಹಾರ ಜಮಾ ಮೊಬೈಲ್‌ನಲ್ಲೇ Status Check ಮಾಡಿ