ಎಲ್ಲರಿಗೂ ನಮಸ್ಕಾರ, ನೀವು ಕೂಡಾ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ..? ಎಲ್ಲಿ ಅರ್ಜಿ ಸಲ್ಲಿಸಬೇಕು..? Free Sewing Machine ಯಾರು ಅರ್ಜಿ ಸಲ್ಲಿಸಲು ಅರ್ಹರು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ಸರ್ಕಾರದ ಸೌಲಭ್ಯ ಪಡೆದುಕೊಳ್ಳಬಹುದು.
ವಯೋಮಿತಿ:
ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
ವಾರ್ಷಿಕ ಆದಾಯ:
ಗ್ರಾಮೀಣ ಪ್ರದೇಶ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 98,000 ರೂ. ಇರಬೇಕು. ಹಾಗೂ ಪಟ್ಟಣ ಪ್ರದೇಶದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 1,20,000 ರೂ. ಒಳಗಿರಬೇಕು.
ರಾಜ್ಯ ಸರ್ಕಾರವು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳಿಗೆ ಸೇರಿದ ಬಡ ಕುಟುಂಬದ ಅಭ್ಯರ್ಥಿಗಳಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಬಡ ಕುಟುಂಬಗಳಿಗೆ ಸೇರಿದ ಮಹಿಳೆಯರಿಗೆ ಹೊಲಿಗೆ ಯಂತ್ರ ನೀಡುವ ಸ್ವಾವಲಂಭಿ ಯೋಜನೆಯನ್ನು ಈ ವರ್ಷದಿಂದ ಆರಂಭಿಸಲಾಗಿದೆ.
Free Sewing Machine Scheme 2024 Karnataka:
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ
- ಗಂಗಾ ಕಲ್ಯಾಣ ನೀರಾವರಿ ಯೋಜನೆ
- ಅರಿವು-ಶೈಕ್ಷಣಿಕ ಸಾಲ ಯೋಜನೆ
- ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ
- ಸ್ವಾವಲಂಬಿ ಸಾರಥಿ ಯೋಜನೆ
- ಸ್ವಯಂ ಉದ್ಯೋಗ ಸಾಲ ಯೋಜನೆ
- ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ
- ಉಚಿತ ಹೊಲಿಗೆ ಯಂತ್ರ ಯೋಜನೆ
ಈ ಮೇಲಿನ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2A, 3A ಮತ್ತು 3B ಗೆ ಸೇರಿದ ಅಭ್ಯರ್ಥಿಗಳಾಗಿರಬೇಕು.
ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಅಭ್ಯರ್ಥಿಗಳು ಈ ಯೋಜನೆಗಳು ಅನ್ವಯವಾಗುವುದಿಲ್ಲ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2024
Free Sewing Machine Scheme Karnataka Application Link:
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: sevasindhu.karnataka.gov.in, dbcdc.karnataka.gov.in
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಇತರೆ ಮಾಹಿತಿಗಳನ್ನು ಓದಿ: