Free Tailoring Training: ಉಚಿತ ಟೈಲರಿಂಗ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

By: ವಿಜಯಲಕ್ಷ್ಮಿ ಪೂಜಾರಿ

On: Wednesday, July 10, 2024 4:25 PM

Google News
Follow Us
Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಫ್ಯಾಶನ್ ಡಿಸೈನಿಂಗ್ ಹಾಗೂ ಟೈಲರಿಂಗ್ ಕಲಿಯಲು ಆಸಕ್ತಿ ಹೊಂದಿರುವ ಮಹಿಳೆಯರಿಗೆ ಸಿಹಿ ಸುದ್ದಿ. ಉಚಿತ 30 ದಿನಗಳ ತರಬೇತಿಗೆ ಅರ್ಜಿಯನ್ನು (Free Tailoring Training) ಆಹ್ವಾನಿಸಲಾಗಿದೆ ಅರ್ಹರು ಅರ್ಜಿ ಸಲ್ಲಿಸಬಹುದು. ವಯೋಮಿತಿ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಓದಿರಿ.

ಫ್ಯಾಶನ್ ಡಿಸೈನಿಂಗ್ (Fashion Designing) ಹಾಗೂ ಟೈಲರಿಂಗ್ (Tailoring ) 30 ದಿನಗಳ ಉಚಿತ ತರಬೇತಿಯನ್ನು ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ.

ಫ್ಯಾಶನ್ ಡಿಸೈನಿಂಗ್ ಹಾಗೂ ಟೈಲರಿಂಗ್ ತರಬೇತಿಯು ಆಗಸ್ಟ್ 1 ರಿಂದ ಆರಂಭವಾಗಲಿದ್ದು, ಗ್ರಾಮೀಣ ಪ್ರದೇಶದ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 45 ವರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯಲು ಬರಬೇಕು.

Free Tailoring Training ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ನರೇಗಾ ಜಾಬ್ ಕಾರ್ಡ್
  • ರೇಷನ್ ಕಾರ್ಡ್
  • ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಜುಲೈ 23 ಕೊನೆಯ ದಿನವಾಗಿದೆ.

ಇತರೆ ಮಾಹಿತಿಗಳನ್ನು ಓದಿ:

ಹೊಸ BPL ರೇಷನ್ ಕಾರ್ಡ್

ರೇಷನ್ ಕಾರ್ಡ್ ತಿದ್ದುಪಡಿ ಆರಂಭ

ಗೃಹಲಕ್ಷ್ಮಿ DBT Status Check ಮಾಡಿ

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ

For Feedback - feedback@example.com

Leave a Comment