Gruhalakshmi Scheme: ಈ 16 ಜಿಲ್ಲೆಯವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ..!

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) 11 ಮತ್ತು 12 ನೇ ಕಂತಿನ ಹಣವು ಯಾವಾಗ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ ಓದಿರಿ.

ಗೃಹಲಕ್ಷ್ಮೀ ಯೋಜನೆಯ ಹಣವನ್ನು ಎರಡು ಹಂತಗಳಲ್ಲಿ ಬಿಡುಗಡೆ ಯಾಗಲಿದೆ. 11 ಮತ್ತು 12 ನೇ ಕಂತಿನ ಹಣವನ್ನು ಮೊದಲ ಹಂತದಲ್ಲಿ ಒಟ್ಟು 16 ಜಿಲ್ಲೆಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣವು ಸಂದಾಯವಾಗಲಿದೆ. ಇನ್ನುಳಿದ ಜಿಲ್ಲೆಗಳಿಗೆ ಎರಡನೇ ಹಂತದಲ್ಲಿ ಹಣ ಬಿಡುಗಡೆ ಆಗಲಿದೆ.

Gruhalakshmi Scheme 2,000 Amount:

ಗೃಹಲಕ್ಷ್ಮೀ ಯೋಜನೆಯ ಮೂಲಕ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂ. ಅನ್ನು ನೀಡಲಾಗುತ್ತದೆ. ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. ಮೊದಲು ಯಾವ ಜಿಲ್ಲೆಯವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗುತ್ತದೆ ಎಂಬ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಕೆಲವು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣವು ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ. ಗೃಹಲಕ್ಷ್ಮೀ ಯೋಜನೆಯ ಹಣವು ಯಾವಾಗ ಸಂದಾಯವಾಗುತ್ತದೆ ಎಂದು ಮನೆ ಯಜಮಾನಿಯರು ಕಾತುರದಿಂದ ಕಾಯುತ್ತಿದ್ದಾರೆ.

ಕರ್ನಾಟಕ ಸರಕಾರ ರಾಜ್ಯದಲ್ಲಿನ 16 ಜಿಲ್ಲೆಗಳಿಗೆ ಗೃಹಲಕ್ಷ್ಮೀ ಯೋಜನೆ (Gruhalakshmi Scheme) ಯ ಅಡಿಯಲ್ಲಿ ಬಾಕಿ ಇರುವ 11 ಮತ್ತು 12 ನೇ ಕಂತಿನ ಹಣವನ್ನು ಜಮೆ ಮಾಡಲು ಮುಂದಾಗಿದೆ. ಈ ಕೆಳಗಿನ ಜಿಲ್ಲೆಯವರಿಗೆ ಗೃಹಲಕ್ಷ್ಮೀ ಯೋಜನೆಯ ಹಣವು ಮೊದಲು ಸಂದಾಯವಾಗುತ್ತದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ದಾವಣಗೆರೆ, ಮೈಸೂರು, ಧಾರವಾಡ, ಬೆಳಗಾವಿ, ಹುಬ್ಬಳ್ಳಿ, ಕೋಲಾರ, ವಿಜಯಪುರ, ತುಮಕೂರು, ಕಲಬುರಗಿ, ಚಿತ್ರದುರ್ಗ ಜಿಲ್ಲೆಗಳಿಗೆ ಹಣ ಬಿಡುಗಡೆ ಆಗಲಿದೆ.

ಇನ್ನುಳಿದ ಜಿಲ್ಲೆಗಳಿಗೆ ಎರಡನೇ ಹಂತದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗಲಿದೆ ಎಂಬ ಮಾಹಿತಿಯಿದೆ. ಈಗಾಗಲೇ ಹಲವರ ಬ್ಯಾಂಕ್‌ ಖಾತೆಗಳಿಗೆ ಹಣ ಜಮೆ ಆಗಿದ್ದು, DBT ಸ್ಟೇಟಸ್ ಮೂಲಕ ನಿಮ್ಮ ಖಾತೆಗೆ ಹಣ ಸಂದಾಯ ಆಗಿದೆಯಾ ಎಂದು ಚೆಕ್‌ ಮಾಡಿಕೊಳ್ಳಬಹುದು.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮಿ DBT Status Check ಮಾಡಿ

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ

Leave a Comment

error: Content is protected !!