ಎಲ್ಲರಿಗೂ ನಮಸ್ಕಾರ, ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣವು ಯಾವಾಗ ಅರ್ಹ ಫಲಾನುಭವಿಗಳಿಗೆ ಖಾತೆಗೆ ಜಮಾ ಆಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ರಾಜ್ಯದ ಮಹಿಳೆಯರ ಸಭಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದುವರೆಗೂ ಸುಮಾರು ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಲಾಭ ಪಡೆದುಕೊಂಡಿದ್ದಾರೆ.
Gruhalakshmi Scheme Money Credit Soon:
ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂ. ನೀಡಲಾಗುತ್ತಿದೆ. ಇದುವರೆಗೆ ಸರ್ಕಾರವು ಹತ್ತು ಕಂತುಗಳನ್ನು ಫಲಾನುಭವಿಗ ಮಹಿಳೆಯರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಆಗಿದೆ ಆದರೆ 11 ಮತ್ತು 12 ನೇ ಕಂತಿನ ಹಣ ಯಾವಾಗ ಸಂದಾಯವಾಗುತ್ತದೆ ಎಂದು ತಿಳಿಸಲಿದ್ದೇವೆ.
ಗೃಹಲಕ್ಷ್ಮಿ ಯೋಜನೆಯ 11 ಮತ್ತು 12 ನೇ ಕಂತಿನ 4000 ರೂ ಹಣವು ಒಟ್ಟಿಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.
ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಸಂದಾಯವಾಗದ ಕಾರಣ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣವು ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15 ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ನಿಮ್ಮ ಖಾತೆಗೆ ಜಮಾ ಆಗಿದೇಯೆ ಎಂಬುದನ್ನು ಗೃಹಲಕ್ಷ್ಮಿ DBT Status Check ಮಾಡಿಕೊಳ್ಳಬಹುದು.
ಇತರೆ ಮಾಹಿತಿಗಳನ್ನು ಓದಿ:
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ
Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ