ಎಲ್ಲರಿಗೂ ನಮಸ್ಕಾರ, ನಿಮ್ಮ ವಾಹನಗಳಿಗೆ HSRP Number Plate ಅನ್ನು ಅಳವಡಿಸಿ ಕೊಂಡಿಲ್ಲವೆ..? ಹಾಗಿದ್ದರೇ ಇಲ್ಲಿದೆ ನಿಮಗೆ ಗುಡ್ ನ್ಯೂಸ್.
ಸುರಕ್ಷತೆಯ ಹಿತದೃಷ್ಟಿಯಿಂದ HSRP ನಂಬರ್ ಪ್ಲೇಟ್ ಅನ್ನು ಅಳವಡಿಸುವುದನ್ನು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಕಡ್ಡಾಯ ಮಾಡಲಾಗಿದೆ. ಅದಕ್ಕಾಗಿ ಜೂನ್ 12 ರಂದು ಕಡೆಯ ದಿನವಾಗಿತ್ತು, ಆದರೆ ಇದೀಗ ವಾಹನ ಸವಾರರಿಗೆ, ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.
HSRP Number Plate Last Date:
ವಾಹನ ಸವಾರರು ಯಾರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿ ಕೊಂಡಿಲ್ಲವೂ ಅಂತವರಿಗೆ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಗಡುವು ವಿಸ್ತರಿಸಲಾಗಿದೆ. ಹೆಚ್ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವುದಕ್ಕೆ ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ಗಡುವು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.
ಬಿಎನ್‌ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ಅವರನ್ನು ಒಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು “ಕರ್ನಾಟಕ ಸರ್ಕಾರ HSRP ಅಳವಡಿಕೆಗೆ ನೀಡಲಾಗಿರುವ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಣೆ ಮಾಡಲು ನಿರ್ಧರಿಸಿದೆ.
ಆದರೆ, ರಜಾಕಾಲೀನ ಪೀಠವು ಮೇ 21 ರಂದು ಕ್ರಮಕೈಗೊಳ್ಳಬಾರದು ಎಂದು ಆದೇಶಿಸಿದೆ. ಹೀಗಾಗಿ, ಗಡುವು ವಿಸ್ತರಿಸಿ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ.
ಆದ್ದರಿಂದ, ಮೇ 21ರ ಆದೇಶದಲ್ಲಿ ಮಾರ್ಪಾಡು ಮಾಡಬೇಕು. ಪೀಠ ಅನುಮತಿಸಿದರೆ ಒಂದು ವಾರದಲ್ಲಿ ಗಡುವು ವಿಸ್ತರಿಸಿ ಅಧಿಸೂಚನೆ ಹೊರಡಿಸಲಾಗುವುದು” ಎಂದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿತು.
HSRP Number Plate Online Registration:
ಸಾರಿಗೆ ಇಲಾಖೆಯ ವೆಬ್‌ಸೈಟ್ http://transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ ನಿಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು
ಇತರೆ ಮಾಹಿತಿಗಳನ್ನು ಓದಿ:
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ
ಮುಂಗಾರು ಬೆಳೆ ವಿಮೆ ಅರ್ಜಿ ಸಲ್ಲಿಕೆ ಆರಂಭ
PM Kisan 17th Installment: ಪಿಎಂ ಕಿಸಾನ್ ಸಮ್ಮಾನ ನಿಧಿ 17 ನೇ ಕಂತಿನ ಹಣ ಬಿಡುಗಡೆ