ಎಲ್ಲರಿಗೂ ನಮಸ್ಕಾರ, ಕರ್ನಾಟಕ ರಾಜ್ಯದ ಗಿಗ್ ಕಾರ್ಮಿಕರಿಗೆ ಗುಡ್ ನ್ಯೂಸ್. ದೇಶದಲ್ಲಿಯೇ ಮೊದಲ ಬಾರಿಗೆ ʼಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆʼ (Gig Workers Insurance Scheme) ಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಸೌಲಭ್ಯಗಳೇನು..? ಹಾಗೂ ಅರ್ಹತೆ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದು ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಗೆ ತಂದ ಯೋಜನೆಯಾಗಿದೆ. ಗಿಗ್ ಕಾರ್ಮಿಕರು ಕರ್ತವ್ಯದಲ್ಲಿರುವಾಗ ಅಥವಾ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಈ ಯೋಜನೆ ಅನ್ವಯವಾಗುತ್ತದೆ.
ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಗಿಗ್ ಕಾರ್ಮಿಕರ ವಿಮಾ ಯೋಜನೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
Gig Workers Insurance Scheme ಸೌಲಭ್ಯಗಳು:
- ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ 2 ಲಕ್ಷ ಹಾಗೂ ಜೀವ ವಿಮೆ ರೂ 2 ಲಕ್ಷ ಸೇರಿ ಒಟ್ಟು ರೂ. 4 ಲಕ್ಷ
- ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. 2 ಲಕ್ಷಗಳವರೆಗೆ.
- ಆಸ್ಪತ್ರೆ ವೆಚ್ಚ ಮರುಪಾವತಿ ರೂ.1 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ)
- ಜೀವ ವಿಮಾ ರೂ. 2 ಲಕ್ಷಗಳು.
ಈ ಕಾರ್ಮಿಕರು ನೋಂದಣಿಗೆ ಅರ್ಹರು:
ಸ್ಪಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಫ್ಲೋ, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರು ಅರ್ಹರು.
Karnataka State Gig Workers Insurance Scheme ನೋಂದಣಿಗೆ ಅರ್ಹತೆ:
- ಕನಿಷ್ಠ 18 ರಿಂದ ಗರಿಷ್ಠ 60 ವರ್ಷ ವಯೋಮಾನದವರು ನೋಂದಣಿ ಮಾಡಿಕೊಳ್ಳಬಹುದು.
- ಆದಾಯ ತೆರಿಗೆ (Income Tax) ಪಾವತಿದಾರರಾಗಿರಬಾರದು.
- ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು.
- ಕರ್ನಾಟಕದಲ್ಲಿ ಗಿಗ್ ವೃತ್ತಿ (ಡೆಲಿವರಿ ಕಾರ್ಯ) ನಿರ್ವಹಿಸುತ್ತಿರುವವರಿಗೆ ಮಾತ್ರ.
ಅಗತ್ಯ ದಾಖಲೆಗಳು:
- ಆಧಾರ್ ನಂಬರ್
- ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ / ವೇತನ ಚೀಟಿ / ವೇತನ ಪಡೆದ ಬ್ಯಾಂಕ್ ಪಾಸ್ ಬುಕ್.
- ಇ-ಶ್ರಮ್ ನೋಂದಣಿ ಸಂಖ್ಯೆ ಇಲ್ಲವಾದಲ್ಲಿ www.eshram.gov.in ಅಲ್ಲಿ ನೋಂದಾಯಿಸಿ ಪಡೆದುಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಕಾರ್ಮಿಕ ಸಹಾಯವಾಣಿ 155214 (24×7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆ.
ಇತರೆ ಮಾಹಿತಿಗಳನ್ನು ಓದಿ:
ಗೃಹಲಕ್ಷ್ಮಿ DBT Status Check ಮಾಡಿ
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ
Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ