ಸರ್ಕಾರದಿಂದ ಪ್ರತಿ ತಿಂಗಳು 800 ರೂ. ಜಮಾ, ಅರ್ಹರು ಈ ಯೋಜನೆಗೆ ಅರ್ಜಿ ಸಲ್ಲಿಸಿ | Manaswini Scheme Karnataka

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಈ ಯೋಜನೆಯಡಿ ಸರ್ಕಾರದಿಂದ ಪ್ರತಿ ತಿಂಗಳು 800 ರೂ. ನೀಡಲಾಗುತ್ತದೆ. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು? ಯಾವೇಲ್ಲ ದಾಖಲೆಗಳು ಬೇಕಾಗುತ್ತವೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ಹೌದು ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ 40 ವರ್ಷ ದಿಂದ 64 ವರ್ಷದ ಒಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸಿ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ಮನಸ್ವಿ ಯೋಜನೆಯ (Manaswini Scheme) ಮೂಲಕ ಪ್ರತಿ ತಿಂಗಳು ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ 800 ರೂ. ಅನ್ನು ಸರ್ಕಾರ ಅವರ ಬ್ಯಾಂಕ್ ಅಥವಾ ಅಂಚೆ ಖಾತೆಗಳಿಗೆ ನೇರವಾಗಿ ಸಂದಾಯ ಮಾಡಲಾಗುತ್ತದೆ. ನೀವೆನಾದರು ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯಾಗಿದ್ದರೆ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.

ಈ ಯೋಜನೆ ಅರ್ಜಿ ಸಲ್ಲಿಸಲು ಯಾವೇಲ್ಲಾ ಅರ್ಹತೆಯನ್ನು ಹೊಂದಿರಬೇಕು ಹಾಗೂ ಯಾವ ಅಗತ್ಯ ದಾಖಲೆಗಳು ಬೇಕಾಗುತ್ತವೆ ಎಂಬ ಮಾಹಿತಿಯು ಈ ಕೆಳಗಿನಂತಿದೆ. ಸರಿಯಾಗಿ ಓದಿ ಅರ್ಜಿ ಸಲ್ಲಿಸಿ.

Manaswini Scheme ಅರ್ಹತಾ ಮಾನದಂಡ:

ಅರ್ಜಿ ಸಲ್ಲಿಸುವವರು 40 ರಿಂದ 64 ವರ್ಷದೊಳಗಿರಬೇಕು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಫಲಾನುಭವಿಗಳ ವಾರ್ಷಿಕ ಆದಾಯ 32,000 ರೂ. ಕ್ಕಿಂತ ಕಡಿಮೆ ಇರಬೇಕು.
ರಾಷ್ಟ್ರೀಯ ವೃದ್ಧಾಪ್ಯ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ದೇವದಾಸಿ ವೇತನ ಅಥವಾ ಅಂಗವಿಕಲರ ವೇತನ ಅಥವಾ ಯಾವುದೇ ರೀತಿಯ ಮಾಸಾಶನವನ್ನು ಸಾರ್ವಜನಿಕ ಅಥವಾ ಖಾಸಗಿ ಮೂಲಗಳಿಂದ ಪಡೆಯುತ್ತಿರುವ ವ್ಯಕ್ತಿಗಳು ಈ ಯೋಜನೆಯ ಮಾಸಾಶನ ಪಡೆಯಲು ಅರ್ಹರಾಗಿರುವುದಿಲ್ಲ.

Manaswini Scheme ಅಗತ್ಯ ದಾಖಲೆಗಳು:

  1. ಬಿಪಿಲ್‌(BPL) ಪಡಿತರ ಚೀಟಿ, ಇಲ್ಲದಿದ್ದಲ್ಲಿ ಆದಾಯ ಪ್ರಮಾಣ ಪತ್ರ ನೀಡಬೇಕು.
  2. ಮತದಾರರ ಗುರುತಿನ ಚೀಟಿ ಅಥವಾ ವಿಳಾಸದ ಬಗ್ಗೆ ದೃಢೀಕರಣ ದಾಖಲೆ/ವಯಸ್ಸಿನ ಬಗ್ಗೆ ದೃಢೀಕರಣ ಪತ್ರ.
  3. ಅವಿವಾಹಿತರು ತಮಗೆ ವಿವಾಹ ಆಗಿಲ್ಲದಿರುವ ಬಗ್ಗೆ ಸ್ವಯಂ ಘೋಷಿತ ಪ್ರಮಾಣ ಪತ್ರ
  4. ವಿವಾಹ ವಿಚ್ಚೇದಿತರು ವಿಚ್ಚೇದನದ ಸ್ವಯಂ ಘೋಷಿತ ಪ್ರಮಾಣ ಪತ್ರ
  5. ಬ್ಯಾಂಕ್‌ ಮತ್ತು ಅಂಚೆ ಖಾತೆ ವಿವರಗಳು
  6. ಆಧಾರ್‌ ಕಾರ್ಡ್

ಪಿಂಚಣಿ ಮೊತ್ತ: 800 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿದಾರರು ವಾಸಸ್ಥಳ ವ್ಯಾಪ್ತಿಯ ಅಟಲ್‌ ಜೀ ಜನಸ್ನೇಹಿ ಕೇಂದ್ರದ ಮೂಲಕ ಅರ್ಜಿ ಸಲ್ಲಿಬಹುದು.

ಇತರೆ ಮಾಹಿತಿಗಳನ್ನು ಓದಿ:

ರೇಷನ್‌ ಕಾರ್ಡ್‌ Status Check ಮಾಡಿ

ಮೊಬೈಲ್‌ನಲ್ಲೇ ನಿಮ್ಮ ಜಮೀನಿನ ಪಹಣಿಗೆ ಆಧಾರ್ ಕಾರ್ಡ್ ಲಿಂಕ್‌ ಮಾಡಿ

ಗೃಹಲಕ್ಷ್ಮೀ ಯೋಜನೆಯ 2000 ರೂ. ಹಣ ಬಂದಿಲ್ಲವೇ..? ಸರ್ಕಾರದಿಂದ ಹೊಸ ಅಪಡೇಟ್‌

ಬೆಳೆ ಪರಿಹಾರ ಜಮಾ ಮೊಬೈಲ್‌ನಲ್ಲೇ Status Check ಮಾಡಿ

ಗೃಹಲಕ್ಷ್ಮೀ ಯೋಜನೆ DBT Status Check ಮಾಡಿ

Leave a Comment

error: Content is protected !!