New Ration Card: ಹೊಸ ರೇಷನ್ ಕಾರ್ಡ್ ಅರ್ಜಿ, ಪಡಿತರ ಚೀಟಿ ತಿದ್ದುಪಡಿಗೆ ಪ್ರಕ್ರಿಯೆ ಅವಕಾಶ

By: ವಿಜಯಲಕ್ಷ್ಮಿ ಪೂಜಾರಿ

On: Sunday, July 28, 2024 6:01 PM

Google News
Follow Us
Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ..? ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಬೇಕೆ..? ರೇಷನ್ ಕಾರ್ಡ್ (New Ration Card) ಗೆ ಸಂಬಂಧಿಸಿದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.

ಬಡತನ ರೇಖೆಗಿಂತ ಕೆಳಗಿರುವವರಿಗೆ ರೇಷನ್ ಕಾರ್ಡ್ ನೀಡಿ ಸರ್ಕಾರಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತಲೆ ಇರುತ್ತವೆ. ಅವುಗಳಲ್ಲಿ ಕರ್ನಾಟಕ ಸರ್ಕಾರದ ಜಾರಿಗೆ ತಂದಿರುವ ಐದು ಯೋಜನೆಗಳ ಹೌದು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಾಗಿನಿಂದ ಹೊಸ ರೇಷನ್‌ ಕಾರ್ಡ್‌ಗೆ ಬೇಡಿಕೆ ಹೆಚ್ಚಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ಜಮಾ ಮಾಡಲಾಗುತ್ತಿದೆ ಹಾಗೂ ರೇಷನ್‌ ಕಾರ್ಡ್‌‌ ಹೊಂದಿದವರಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ 5 ಕೆಜಿ ಅಕ್ಕಿ ಮತ್ತು ಹೆಚ್ಚುವರಿ 5 ಕೆಜಿ ಬದಲಿಗೆ ಪ್ರತಿಯೊಬ್ಬರಿಗೆ 170 ರೂ. ಬ್ಯಾಂಕ್‌ ಖಾತೆಗೆ ಜಮಾ ಮಾಡುತ್ತಿದ್ದಾರೆ.

ರೇಷನ್ ಕಾರ್ಡ್ ಹೊಂದಿದವರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಗೃಹಲಕ್ಷ್ಮೀ ಅರ್ಜಿ ಸಲ್ಲಿಸಲು ಪಡಿತರ ಚೀಟಿ ಕಡ್ಡಾಯವಾಗಿ ಬೇಕಾಗುತ್ತದೆ.

Ration Card Correction:

ರೇಷನ್ ಕಾರ್ಡ್ ತಿದ್ದುಪಡಿ, ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಹಾಗೂ ಹೆಸರನ್ನು ತೆಗೆಯಲು ಅವಕಾಶ ನೀಡಲಾಗಿದೆ. ನಿಮ್ಮ ಹತ್ತಿರದ ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ ಕೇಂದ್ರಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್‌ ತಿದ್ದುಪಡಿ ಮಾಡಿಸಬಹುದು.

  • ಹೆಸರು ತಿದ್ದುಪಡಿ
  • ಹೆಸರು ಸೇರ್ಪಡೆ
  • ಯಜಮಾನಿ ಬದಲಾವಣೆ
  • ರೇಷನ್ ಕಾರ್ಡ್‌ದಿಂದ ಹೆಸರನ್ನು ತೆಗೆಯಲು
  • ಇ-ಕೆವೈಸಿ ಮತ್ತು ಇತರೆ ಸೇವೆಗಳು, ಇತ್ಯಾದಿ

New Ration Card Update:

ಬಹಳ ದಿನಗಳಿಂದ ಅರ್ಹ ಫಲಾನುಭವಿಗಳು ಹೊಸ ರೇಷನ್ (New Ration Card) ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಆದರೆ ಚುನಾವಣೆ ಕಾರಣದಿಂದಾಗಿ ಹೊಸ ಪಡಿತರ ಚೀಟಿ ಪ್ರಕ್ರೀಯೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ರಾಜ್ಯದಲ್ಲಿ ಶೇಕಡಾ 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ ಇದರಲ್ಲಿ ಅನರ್ಹರು ಸರ್ಕಾರದ ಲಾಭ ಪಡೆಯುತ್ತಿದ್ದಾರೆ.

ಅನರ್ಹ BPL ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ರೇಷನ್ ಕಾರ್ಡ್‌ಗಳನ್ನು ನೀಡಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ‌ ಈಗಾಗಲೇ ಸೂಚನೆ ನೀಡಿದ್ದಾರೆ.

1.73 ಲಕ್ಷ BPL ಕಾರ್ಡ್‌ಗಾಗಿ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಶೀಘ್ರದಲ್ಲೇ ಅವುಗಳನ್ನು ವಿಲೇವಾರಿ ಮಾಡಿ ಅರ್ಹ ಫಲಾನುಭವಿಗಳಿಗೆ ಕಾರ್ಡ್‌ ವಿತರಣೆ ಮಾಡಲಾಗುತ್ತದ್ದೆ ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ಅವರು ವಿಧಾನ ಪರಿಷತ್‌ ಕಲಾಪದಲ್ಲಿ ಮಾಹಿತಿ ನೀಡಿದ್ದಾರೆ.

ಶೀಘ್ರದಲ್ಲೇ ಹೊಸ ರೇಷನ್‌ ಕಾರ್ಡ್‌ಗಾಗಿ ಅರ್ಜಿ ಆಹ್ವಾನಿಸುವ ನಿರೀಕ್ಷೆ ಇದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳನ್ನು ಇಟ್ಟುಕೊಳ್ಳುವುದು ಒಳಿತು.

ಇತರೆ ಮಾಹಿತಿಗಳನ್ನು ಓದಿ:

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಗೃಹಲಕ್ಷ್ಮೀ DBT Status Check ಮಾಡಿ, 2000 ರೂ. ಬಂತಾ ನೋಡಿ

ಬೆಳೆ ಪರಿಹಾರ: ರೈತರ ಬ್ಯಾಂಕ್ ಖಾತೆಗಳಿಗೆ 3000 ರೂ. ಜಮಾ

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

For Feedback - feedback@example.com

Leave a Comment