ಎಲ್ಲರಿಗೂ ನಮಸ್ಕಾರ, ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿರುವ ಫಲಾನುಭವಿಗಳಿಗೆ ಗುಡ್ ನ್ಯೂಸ್. ನೀವು ಕೂಡ ಬಹಳ ದಿನಗಳಿಂದ ಹೊಸ BPL ರೇಷನ್ ಕಾರ್ಡ್ (BPL New Ration Card) ಪಡೆಯಬಯಸುತ್ತಿದ್ದೀರಾ..? ಹಾಗಿದ್ದರೆ ಇಲ್ಲಿದೆ ಸಿಹಿ ಸುದ್ದಿ. ಸರ್ಕಾರದಿಂದ ಈ ಕುರಿತು ಅಧಿಕೃತ ಮಾಹಿತಿ ನೀಡಲಾಗಿದೆ.
ಲೋಕಸಭಾ ಚುನಾವಣೆ ಕಾರಣದಿಂದಾಗಿ ಹೊಸ ರೇಷನ್ ಕಾರ್ಡ್ ವಿತರಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಇದೀಗ ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ತಿದ್ದುಪಡಿ ಮಾಡಬಯಸುವವರು ತಿದ್ದುಪಡಿ ಮಾಡಿಸಿಕೊಳ್ಳಿ.
New Ration Card Application 2024:
1.73 ಲಕ್ಷ BPL ಕಾರ್ಡ್‌ಗಾಗಿ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರವೇ ವಿಲೇವಾರಿ ಮಾಡಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ವಿಧಾನ ಪರಿಷತ್ ಕಲಾಪದಲ್ಲಿ ತಿಳಿಸಿದ್ದಾರೆ.
2.95 ಲಕ್ಷ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಯಾಗಿವೆ, ಇದರಲ್ಲಿ 2.36 ಲಕ್ಷ ಮಂದಿ ಅರ್ಹರಿದ್ದಾರೆ. ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ ಒಂದು ವಾರದೊಳಗೆ ಅಂಥವರಿಗೆ ಆರೋಗ್ಯ ಸೇವೆ ಸಿಗುವಂತಹ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 1.73 ಲಕ್ಷ ಕಾರ್ಡ್ ಗಳನ್ನು ವಿತರಣೆ ಮಾಡುವುದು ಬಾಕಿ ಇದ್ದು, ಅರ್ಹರಿಗೆ ಶೀಘ್ರವೇ ಬಿಪಿಎಲ್ ಕಾರ್ಡ್ ಗಳನ್ನು ವಿತರಣೆ ಮಾಡಿ, ಪಡಿತರ ದವಸ ಧಾನ್ಯಗಳನ್ನು ವಿತರಿಸುವ ಕೆಲಸ ಮಾಡಲಾಗುತ್ತದೆ ಎಂದರು.
ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಕಾಶ ನೀಡಲಾಗಿದೆ. ರೇಷನ್ ಕಾರ್ಡ್ ತಿದ್ದುಪಡಿ
ಕರ್ನಾಟಕದಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ಬಂದಾಗಿನಿಂದ ಹೊಸ ರೇಷನ್ ಕಾರ್ಡ್ ಗೆ ಬೇಡಿಕೆ ಹೆಚ್ಚಾಗಿದೆ. ಅನೇಕ ಅರ್ಹ ಫಲಾನುಭವಿಗಳು ಹೊಸ ಕಾರ್ಡ್ ಮಾಡಿಸಿಕೊಳ್ಳಲು ಕಾಯುತ್ತಿದ್ದಾರೆ.
ಇತರೆ ಮಾಹಿತಿಗಳನ್ನು ಓದಿ:
ಗೃಹಲಕ್ಷ್ಮೀ DBT Status Check ಮಾಡಿ, 2000 ರೂ. ಬಂತಾ ನೋಡಿ