ಎಲ್ಲರಿಗೂ ನಮಸ್ಕಾರ, ಹೊಸ ರೇಷನ್ ಕಾರ್ಡ್ (New Ration Card) ಗೆ ಕಾಯುತ್ತಿರುವ ಫಲಾನುಭವಿಗಳಿಗೆ ಗುಡ್ ನ್ಯೂಸ್. ನೀವು ಕೂಡ ಪಡಿತರ ಚೀಟಿ ಪಡೆಯಲು ಕಾಯುತ್ತಿದ್ದೀರಾ..? ಹಾಗಿದ್ದರೇ ಈ ಲೇಖನ ಓದಿ.
ಹೊಸ ರೇಷನ್ ಕಾರ್ಡ್ ಗಳನ್ನು ನೀಡುವ ಪ್ರಕ್ರಿಯೆಯನ್ನು ಸೆಪ್ಟೆಂಬರ್ ನಿಂದ ಆರಂಭಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಬಿಪಿಎಲ್ ಪಡಿತರ ಚೀಟಿಗಾಗಿ ಬಂದಿದ್ದ 2.95 ಲಕ್ಷ ಅರ್ಜಿಗಳಲ್ಲಿ 50 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ವಜಾ ಮಾಡಲಾಗಿದೆ ಎಂದರು. ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ನೀಡಲು ಪರಿಶೀಲನೆ ಮಾಡುವ ಸಂದರ್ಭದಲ್ಲಿ ಅನರ್ಹ ಅರ್ಜಿಗಳನ್ನು ವಜಾ ಮಾಡಲಾಗಿದೆ. 2.40 ಲಕ್ಷ ಅರ್ಜಿಗಳನ್ನು ಪರಿಷ್ಕರಣೆ ಮಾಡಲಾಗಿದೆ ಎಂದರು.
ಆಹಾರ ಇಲಾಖೆಯಿಂದ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗುತ್ತಿದೆ. 90 ಸಾವಿರ ಹೊಸ ರೇಷನ್ ಕಾರ್ಡ್ (New Ration Card) ಗಳಿಗೆ ಬೇಡಿದೆ ಇದ್ದು, ಪರಿಷ್ಕರಣೆ ಮಾಡುವ ಪ್ರಕ್ರಿಯೆ ನಡೆದಿದೆ. ಬಾಕಿ ಉಳಿದಿರುವ ಅರ್ಜಿಗಳನ್ನು ಇತ್ಯರ್ಥ ಮಾಡಿದ ನಂತರ ಸೆಪ್ಟೆಂಬರ್ ನಲ್ಲಿ ಹೊಸ ಪಡಿತರ ಚೀಟಿಗಳನ್ನು ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇತರೆ ಮಾಹಿತಿಗಳನ್ನು ಓದಿ:
ಸ್ವಾವಲಂಬಿ ಸಾರಥಿ ಯೋಜನೆ: ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ