ಎಲ್ಲರಿಗೂ ನಮಸ್ಕಾರ, ಭಾರತ ಸರ್ಕಾರವು ದೇಶದ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ 11,000 ರೂ. ಸಿಗಲಿದೆ. ಈ (PM Matru Vandana Yojana) ಯೋಜನೆಗೆ ಯಾರು ಅರ್ಹರು, ಯಾವ ದಾಖಲೆಗಳು ಬೇಕಾಗಿತ್ತವೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ.
ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ (Pradhan Mantri Matru Vandana Yojana) ಪ್ರಯೋಜನವನ್ನು ಈಗಾಗಲೇ ಲಕ್ಷಾಂತರ ಮಹಿಳೆಯರು ಪಡೆದುಕೊಂಡಿದ್ದಾರೆ. ಗರ್ಭಿನಿಯರಿಗಾಗಿ ಈ ಯೋಜನೆಯನ್ನು ಆರಂಭಿಸಲಾಗಿದೆ. ಗರ್ಭಿಣಿಯರು ಮತ್ತು ನವಜಾತ ಶಿಶುಗಳಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.
PM Matru Vandana Yojana:
ಮಾತೃತ್ವ ವಂದನಾ ಯೋಜನೆಯ ಮೂಲಕ ಹಣಕಾಸಿನ ನೆರವು ಒದಗಿಸುವುದರ ಜೊತೆಗೆ ಗರ್ಭಿಣಿ ಮಹಿಳೆಯರಿಗೆ ಉಚಿತ ಔಷಧಿ ಗರ್ಭಧಾರಣೆಯ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕೂಡ ಉಚಿತವಾಗಿ ಒದಗಿಸಲಾಗುತ್ತದೆ.
ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ, ಮಹಿಳೆಯರಿಗೆ ಮೊದಲ ಗರ್ಭಾವಸ್ಥೆಯಲ್ಲಿ 5,000 ರೂ ಮತ್ತು ಎರಡನೇ ಮಗುವಿನ ಜನನಕ್ಕೆ 6,000 ರೂ. ಹಣವು ನೇರವಾಗಿ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ.
ಫಲಾನುಭವಿಗಳಿಗೆ 5,000 ರೂ ಗಳನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ಮೊದಲನೇ ಕಂತು 3000 ರೂ. ಹಾಗೂ 2000 ರೂ. ನೀಡಲಾಗುವುದು. ಎರಡನೇ ಮಗು ಹೆಣ್ಣು ಮಗು ಆಗಿದ್ದರೆ ಒಂದೆ ಕಂತಿನಲ್ಲಿ 6,000 ಗಳನ್ನು ಖಾತೆಗೆ ವರ್ಗಾವಣೆ ಮಾಡುತ್ತಾರೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಜನನ ಪ್ರಮಾಣ ಪತ್ರ
- ಪಾನ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
PMMVY Scheme ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಫಲಾನುಭವಿಗಳು ಆನ್’ಲೈನ್ ಹಾಗೂ ಆಪ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನಿಮ್ಮ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಗರ್ಭಿಣಿ ಆಗಿರುವುದರ ಬಗ್ಗೆ ಮೆಡಿಕಲ್ ಸರ್ಟಿಫಿಕೇಟ್ ಒದಗಿಸಿ ನೋಂದಣಿ ಮಾಡಿಕೊಳ್ಳಬಹುದು. ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://pmmvy.wcd.gov.in/ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸಬಹುದು.
ಇತರೆ ಮಾಹಿತಿಗಳನ್ನು ಓದಿ: