ಎಲ್ಲರಿಗೂ ನಮಸ್ಕಾರ, ಸರ್ಕಾರವು ನೀಡುತ್ತಿರುವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೆ..? ಯಾರು ಅರ್ಜಿ ಸಲ್ಲಿಸಬಹುದು..? SSP Scholarship 2024 ಅರ್ಜಿ ಸಲ್ಲಿಕೆ ದಿನಾಂಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25 ನೇ ಸಾಲಿನ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಈ ವಿದ್ಯಾರ್ಥಿವೇತನದ ಲಾಭ ಪಡೆದುಕೊಳ್ಳಬಹುದಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್-ನಂತರದ ಕೋರ್ಸುಗಳಾದ 12th ಮತ್ತು ಸಮನಾಂತರ ಕೊರ್ಸ್, ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುತ್ತಿರುವ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ (Vidyasiri Scholarship) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Vidyasiri Scholarship ಅಗತ್ಯ ದಾಖಲೆಗಳು:
- ಆಧಾರ್ ನಂಬರ್ ಹಾಗೂ ಆಧಾರ್ ಕಾರ್ಡ್ ನಲ್ಲಿ ಇರುವ ಹಾಗೆ ಹೆಸರು
- ಮೊಬೈಲ್ ನಂಬರ್
- ಇ-ಮೇಲ್ ಐಡಿ
- 10 ನೇ ತರಗತಿ ನೋಂದಣಿ ಸಂಖ್ಯೆ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ
- ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
- ವಿದ್ಯಾರ್ಥಿಯು ವಾಸವಿರುವ ಜಿಲ್ಲೆಯ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
- ಕಾಲೇಜು ದಾಖಲಾತಿ/ ನೋಂದಣಿ ಸಂಖ್ಯೆ
- ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ)
- ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)
ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2025
SSP Scholarship 2024 ಪ್ರಮುಖ ಲಿಂಕ್ ಗಳು:
ವಿದ್ಯಾರ್ಥಿಗಳು ssp.postmatric.karnataka.gov.in ವೆಬ್ ಸೈಟ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ಲಿಂಕ್: Apply ಮಾಡಿ
- ಅಧಿಕೃತ ವೆಬ್ ಸೈಟ್: ssp.postmatric.karnataka.gov.in, bcwd.karnataka.gov.in
- ಇ-ಮೇಲ್ ಐಡಿ: [email protected]
- ಇಲಾಖೆಯ ಸಹಾಯ ವಾಣಿ: 8050770005
- ದೂರವಾಣಿ ಸಂಖ್ಯೆ: 1902
ಇತರೆ ಮಾಹಿತಿಗಳನ್ನು ಓದಿ: